ಉದಯವಾಹಿನಿ, ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಮ್ಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್, ಸೋಮವಾರ ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರ ಮಧ್ಯರಾತ್ರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಬರುವ ದೂರುಗಳು ಹಾಗೂ ವಾರ್ ರೂಮ್ ಸಿಬ್ಬಂದಿ ಕಾರ್ಯವೈಖರಿಯನ್ನು ಶಿವಕುಮಾರ್ ಅವರು ಖುದ್ದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಕೆಲವು ಮಾರ್ಗದರ್ಶನ ನೀಡಿದರು.ಪಾಲಿಕೆ ಆಧಿಕಾರಿಗಳು, ಸಿಬ್ಬಂದಿಗೆ ಸೂಚನೆಗಳು: ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು/ಇಂಜಿನಿಯರ್ಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ರಾಜಧಾನಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಅವರ ಸುರಕ್ಷತೆ ಬಗ್ಗೆ ಸಿಬ್ಬಂದಿ ಗಮನ ಹರಿಸಬೇಕು. ಸಹಾಯವಾಣಿ ಕೇಂದ್ರದಲ್ಲಿ (Helpline Centre) ಸಂಬಂಧಪಟ್ಟ ಅಧಿಕಾರಿಗಳು ಸದಾ ಜಾಗರೂಕರಾಗಿ ಇರಬೇಕು ಎಂದು ಸೂಚಿಸಿದ್ದಾರೆ.
