
ಉದಯವಾಹಿನಿ, ಬೆಂಗಳೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿಅಕ್ರಮವಾಗಿ ಜಿಂಕೆ ಕೊಂಬು, ಆನೆ ದಂತ, ಮಾಂಸ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನ ವೈಯಾಲಿ ಕಾವಲ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತ ಆರೋಪಿಗಳು. ವೈಯಾಲಿ ಕಾವಲ್ 18ನೇ ಕ್ರಾಸ್ ಹಾಗೂ ಗುಟ್ಟಹಳ್ಳಿ ಸರ್ಕಲ್ ಬಳಿ ದಂಧೆಯಲ್ಲಿ ತೊಡಗಿದ್ದಾಗ, ಖಚಿತ ಸುಳಿವಿನ ಮೇಲೆ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ 10 ಲಕ್ಷ ಮೌಲ್ಯದ ಎರಡು ತಲೆಯ ಎರಡು ಹಾವುಗಳು, 12 ಲಕ್ಷ ಮೌಲ್ಯದ 12 ಜಿಂಕೆ ಕೊಂಬು ಹಾಗೂ 5 ಲಕ್ಷ ಮೌಲ್ಯದ ಆನೆ ದಂತಗಳನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
