
ಉದಯವಾಹಿನಿ ದೇವರಹಿಪ್ಪರಗಿ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ಥಿತಿಗತಿಗಳನ್ನು ತಿಳಿಯುವ ನಿಟ್ಟಿನಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ಧಾರವಾಡ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಸಹಾಯಕ ನಿರ್ದೇಶಕರಾದ ಸಿ.ವಾಯ್.ತಂಬಾಕೆ ಭೇಟಿ ಪರಿಶೀಲನೆ.ತಾಲೂಕಿನ ಹಲವು ಶಾಲೆಗಳಿಗೆ ಮಂಗಳವಾರದಂದು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರೀಫ್ ಬಿರಾದಾರ ಅವರ ಜೊತೆ ಖುದ್ದಾಗಿ ಭೇಟಿ ನೀಡಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.ದೇವರಹಿಪ್ಪರಗಿ ತಾಲೂಕಿನ ಆಲಗೂರ,ತುರಕನಗೇರಿ, ಕದರಾಪುರ ತಾಂಡಾ, ಕೋರವಾರ, ಬಮ್ಮನಜೋಗಿ, ಸಿಂದಗಿ ತಾಲೂಕಿನ ಬೋರಗಿ, ಡವಳಾರ ಹಾಗೂ ಹಡಗಿನಾಳ ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಹಲವು ಗ್ರಾಮದ ಶಾಲೆಯ ಶೌಚಾಲಯಗಳನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
