ಉದಯವಾಹಿನಿ, ಕೋಲಾರ: ಕೋಲಾರ ಜಿಲ್ಲೆಯ ೬ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರವು ಘೋಷಿಸಿರುವ ಹಿನ್ನಲೆಯಲ್ಲಿ ಬರಪರಸ್ಥಿತಿ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸರ್ವಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.
ನಗರದ ಜಿಲ್ಲಾಡಳಿತ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಬರಪೀಡಿತ ತಾಲ್ಲೂಕುಗಳಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ರಚಿಸುವ ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಕರೆಯಲಾದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರುಗಳು ಪ್ರತಿ ೧೫ ದಿನಗಳಿಗೊಮ್ಮೆ ಟಾಸ್ಕ್‌ಫೋರ್ಸ್ ಸಮಿತಿ ಸಭೆಯನ್ನು ನಡೆಸಿ ಬರ ವಿಪತ್ತು ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ಚರ್ಚಿಸಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
