ಉದಯವಾಹಿನಿ, ರಾಯಪುರ: ಛತ್ತೀಸಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ನಕ್ಸಲಿಸಂ ನಿರ್ಮೂಲನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಂದ್ರಯಾನ-3 ಯೋಜನೆಯನ್ನು ಯಶಸ್ವಿಗೊಳಿಸಿತು. ಚಂದ್ರನ ಮೇಲೆ ರೋವರ್ ಇಳಿದ ಸ್ಥಳವನ್ನು ಶಿವಶಕ್ತಿ ಸ್ಥಳ ಎಂದು ಮೋದಿ ಗುರುತಿಸಿದರು. ಆದರೆ ಮುಖ್ಯಮಂತ್ರಿ ಭೂಪೇಶ್ ಸಿಂಗ್ ಬಘೇಲ ನೇತೃತ್ವದ ಕಾಂಗ್ರೆಸ ಸರ್ಕಾರ ಮಹಾದೇವನ (ಆಯಪ್) ಹೆಸರಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.
ಮುಂದುವರೆದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಸಾಕಷ್ಟು ಧಾರ್ಮಿಕ ಮತಾಂತರ ನಡೆಸಲಾಗಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆರೋಪಿಸಿದರು.
ನಮ್ಮ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದರೆ 5 ವರ್ಷಗಳಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದರು.
