ಉದಯವಾಹಿನಿ, ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದೆ. ಜನನ, ಮರಣ ನೋಂದಣಿ ವಿಳಂಬ ಶುಲ್ಕದಲ್ಲಿ ಭಾರೀ ಏರಿಕೆ ಮಾಡಲು ನಿರ್ಧರಿಸಿದೆ.
ಜನನ, ಮರಣ ನೋಂದಣಿ ನಿಯಮಗಳು-1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನೂ ಪರಿಷ್ಕರಿಸಲಾಗಿದೆ.
ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂ. ಬದಲು 1000 ರೂ.ಗೆ 30 ದಿನಗಳ ನಂತರ 5 ರೂ. ಬದಲು 200 ರೂ. 1 ವರ್ಷ ಬಳಿಕ ನೋಂದಣಿಗೆ 10 ರೂ. ಬದಲು 500 ರೂ. ಶುಲ್ಕವನ್ನು ಪರಿಷ್ಕರಿಸಲಾಗಿದೆ. ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ.

ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈವರೆಗೆ ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಾಗದೆಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ

Leave a Reply

Your email address will not be published. Required fields are marked *

error: Content is protected !!