ಉದಯವಾಹಿನಿ, ಬೆಂಗಳೂರು: ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್‌ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್‌ ಆಪರೇಟರ್‌ಗಳಿಗೆ ನಿರ್ದೇಶನ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.
ಶ್ರೇಯಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳೂ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್‌ಗಳಲ್ಲಿ ವಿಶೇಷಚೇತನರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಬೇಕು ಎಂದು ಕೋರ್ಟ್‌ ಹೇಳಿದೆ.

Leave a Reply

Your email address will not be published. Required fields are marked *

error: Content is protected !!