ಉದಯವಾಹಿನಿ, ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಸ್ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಾರಿಗೆ ಪ್ರಯಾಣ ದರ ಹೆಚ್ಚಳ ಕುರಿತಂತೆ ಮಾಜಿ ಐಎ ಎಸ್ ಅಧಿಕಾರಿ ಶ್ರೀನಿವಾಸ್ ಮೂರ್ತಿ ನಾಲ್ಕು ನಿಗಮಗಳಿಗೆ ಅನ್ವಯವಾಗುವ 150 ಪುಟಗಳ ವರದಿ ನಿಡಿದ್ದಾರೆ. ಆಯೋಗ ರಚನೆ ಮಾಡಿದರೆ ಪ್ರಯಾಣ ದರ ಹೆಚ್ಚಳ ಮಾಡಬೇಕಾಗುತ್ತದೆ. ಹಾಗಾಗಿ ಆ ಪ್ರಸ್ತಾಪವನ್ನು ಮುಂದೂದಲಾಗಿದೆ.
ಬಸ್ ಟಿಕೆಟ್ ದರ ಹೆಚ್ಚಳದಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತದೆ. ರಾಜ್ಯ ಸಾರಿಗೆ ಸಂಸ್ಥೆ ಸೇವಾ ಮನೋಭಾವದಿಂದ ನಡೆಯುತ್ತಿದೆ. ಲಾಭದ ಉದ್ದೇಶವಿಲ್ಲ. ಸರ್ಕಾರ ಪ್ರತಿ ವರ್ಷ ಕೃಷಿ, ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಅದೇ ರೀತಿ ಸಾರಿಗೆಗೂ ವ್ಯಯ ಮಾಡುತ್ತದೆ ಎಂದರು.

Leave a Reply

Your email address will not be published. Required fields are marked *

error: Content is protected !!