ಉದಯವಾಹಿನಿ, ಬೆಂಗಳೂರು : ನ.15ರಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ನವೆಂಬರ್ 15 ಅಥವಾ 16ರಂದು ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂದು ಮೊದಲು ಹೇಳಲಾಗಿತ್ತು, ಆದರೆ ಪದಗ್ರಹಣಕ್ಕೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 15 ರಂದೇ ಕಾರ್ಯಕ್ರಮ ಫೈನಲ್ ಆಗಿದೆ.ಇದರ ನಡುವೆ ಟ್ವೀಟ್ ಮಾಡಿದ ಅವರು ಮೊದಲ ಹೆಜ್ಜೆ ಬೂತಿನೆಡೆಗೆ ಗುರಿಯು ಒಂದೇ ಗೆಲುವಿನೆಡೆಗೆ ಕಾರ್ಯಕರ್ತ ನಮ್ಮ ಶಕ್ತಿ ಮತದಾರ ನಮ್ಮ ಬಂಧು “ಮತ್ತೆ ಬಿಜೆಪಿ -ಮತ್ತೊಮ್ಮೆಮೋದಿ ಬೂತ್ ಗೆಲ್ಲಿಸಿ – ದೇಶ ಗೆಲ್ಲಿಸಿ ಸಂಕಲ್ಪ ನಮ್ಮದು -ಆಶೀರ್ವಾದ ನಿಮ್ಮದು “. ಸಂಘಟನೆಗೆ ನವ ಚೈತನ್ಯ ತುಂಬುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ, ಇಂದು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರಾದ ಶ್ರೀ ಶಶಿಧರ್ ಅವರ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿಯ ಶುಭ ಕೋರುವುದರೊಂದಿಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಲು ಸಂಕಲ್ಪ ತೊಡಲಾಯಿತು. ಸಂಸದ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ್ ಅವರು, ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
