ಉದಯವಾಹಿನಿ, ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ.
ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.
ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ತನಿಖಾಧಿಕಾರಿಗಳಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದರು.
