ಉದಯವಾಹಿನಿ, ಚಾಮರಾಜನಗರ: ಕನ್ನಡ ಭಾಷೆಯ ಅಳಿವು ಉಳಿವು ಕನ್ನಡಿಗರಾದ ನಮ್ಮೆಲ್ಲರ ಕೈಯ್ಯಲ್ಲೇ ಇದೆ ಎಂದು ಶಿಕ್ಷಕ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಚಾಮರಾಜನಗರ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನ್ನಡ ಮಾಸಾಚರಣೆ 2023′ ಕಾರ್ಯಕ್ರಮವನ್ನು ಕನ್ನಡ ತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ನಮ್ಮ ಉಸಿರು, ಹೃದಯದ ಬಡಿತ, ನಮ್ಮ ನರನಾಡಿಗಳು ಕನ್ನಡಕನ್ನಡ ಎನ್ನಬೇಕು. ಅಂತಹದ್ದೊಂದು ಭಾವನೆ ಪ್ರತಿಯೊಬ್ಬ ಕನ್ನಡಿಗನಲ್ಲೂ ಪ್ರಾವೀಣ್ಯತೆ ನಮಗಿರಲಿ ಸಂತೋಷ, ಆದರೆ ನಮ್ಮ ಭಾಷೆಯನ್ನು ಬೇರೆಯವರ ಬಳಿಯೂ ಬಿಟ್ಟುಕೊಡುವವರು ನಾವಾಗಬಾರದು. ಬೇರೆ ರಾಜ್ಯಗಳಿಗೆ ಅಥವಾದೇಶಕ್ಕೆ ಹೋದರೆ ನಮ್ಮ ಮುಂದಿರುವವರಿಗೆ ಕನ್ನಡ ತಿಳಿದಿದ್ದರೂ ಸಹ ನಾವು ಕನ್ನಡದಲ್ಲಿ ಮಾತನಾಡಲು ಹಿಂಜರಿಯುತ್ತೇವೆ. ಏಕೆಂದರೆ ನಮಗೆ ಕನ್ನಡ ಮಾತನಾಡಲು ಮುಜುಗರ. ಎಲ್ಲಿ ನಮ್ಮನ್ನು ನೋಡಿ ನಗುತ್ತಾರೋ ಎಂಬ ಸಂಕೋಚ. ಆಗ ನಾವು ಕನ್ನಡ ಭಾಷೆಯ ನಾವು ಈ ರೀತಿ ಮಾಡುವುದುಎಷ್ಟರ ಮಟ್ಟಿಗೆ ಸರಿ ಎಂದು ನಮ್ಮನ್ನೇ ನಾವು ಪ್ರಶ್ನಿಸಿಕೊಳ್ಳಬೇಕು. ಬೇರೆ ಭಾಷೆಯ ಜನರಿಗಾಗಿ ನಾವು ನಮ್ಮ ಭಾಷೆಯ ಬಿಟ್ಟುಅವರ ಭಾಷೆಯ ಮಾತನಾಡುವಾಗ ಅವರೇ ಕೆಕನ್ನಡದಲ್ಲಿ ಮಾತನಾಡಲು ಹಿಂಜರಿಯುತ್ತಾರೆ. ಕಾರಣ ಅವರಿಗೆಅವರ ಭಾಷೆಯ ಮೇಲಿರುವ ಪ್ರೀತಿ, ಅವರ ನುಡಿಯ ಮೇಲಿನ ಅಭಿಮಾನ. ನಮ್ಮಕನ್ನಡ ಭಾಷೆಯ ಮೇಲೆ ಕನ್ನಡಿಗರಾದ ನಾವು ಈ ರೀತಿಯಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಕನ್ನಡಿಗರಾದ ನಾವು ಕನ್ನಡಾಂಬೆಯ ಸೇವೆಗೆ ನಮ್ಮ ಬದುಕನ್ನು ಮುಡಿಪಾಗಿಡಬೇಕುಎಂದು ತಿಳಿಸಿದರು. ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಮಾತನಾಡಿ, ಭಾರತ ಮಾತೆಯ ಹೆಮ್ಮೆಯಕನ್ನಡ ನಾಡಲ್ಲಿಇಲ್ಲದಿರುವುದು ಏನೂ ಇಲ್ಲ. ಕನ್ನಡನಾಡು ಹಚ್ಚ ಹಸುರಿನದಟ್ಟವಾದ ವನಗಳಿರುವ ಗಂಧದ ಬೀಡು.  ಶರಾವತಿ, ತುಂಗೆ, ಕಾವೇರಿಯರಉಗಮದ ನಾಡು. ಶಂಕರ, ರಮಾನುಜ, ವಿದ್ಯಾರಣ್ಯ, ಬಸವೇಶ್ವರರು ನೆಲೆಸಿದ ಪುಣ್ಯದ ನೆಲೆಯಿದು. ರನ್ನ, ಷಡಕ್ಷರಿ, ಪೆÇನ್ನ, ಪಂಪ, ಲಕ್ಷ್ಮೀಶ ಮತ್ತುಜನ್ನರು ಹುಟ್ಟಿದ ಪುಣ್ಯಭೂಮಿಯಿದು. ನಮ್ಮ ನಾಡುಕರ್ನಾಟಕ ನಮ್ಮ ಭಾಷೆಯ ಕನ್ನಡದ ಎಂದುಎದೆ ತಟ್ಟಿ ಗರ್ವದಿಂದ ಹೇಳಲು ಇಷ್ಟು ವಿಚಾರಗಳು ಸಾಕಲ್ಲವೇ ಎಂದರು.

Leave a Reply

Your email address will not be published. Required fields are marked *

error: Content is protected !!