ಉದಯವಾಹಿನಿ, ಬೆಂಗಳೂರು: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಡಗರ. ಬೆಲೆ ಏರಿಕೆ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿ ಸಾಗುತ್ತಿದೆ. ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಜನಸ್ತೋಮವೇ ಕಂಡುಬರುತ್ತಿದೆ. ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ದೀಪಾವಳಿಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಿದ್ದಾರೆ
ಎಲ್ಲೆಡೆ ಮನೆಯ ಮುಂಭಾಗದಲ್ಲಿ ಕಟ್ಟಲಾಗುವ ಆಕಾಶಬುಟ್ಟಿ, ಪ್ಲಾಸ್ಟಿಕ್ ಮಾವಿನ ತೋರಣ ಮತ್ತು ಹಣತೆ ಮತ್ತಿತರ ವಸ್ತುಗಳ ಖರೀದಿಗೆ ಗೃಹಿಣಿಯರು ಆಸಕ್ತಿ ತೋರಿದರೆ, ಹಸಿರು ಪಟಾಕಿಗಳ ಖರೀದಿಯ ಭರಾಟೆಯಲ್ಲಿ ಮಕ್ಕಳು, ಯುವಕ-ಯುವತಿಯರು ನಿರತರಾಗಿದ್ದಾರೆ.
ಈಗಾಗಲೇ ಮಾರುಕಟ್ಟೆಯಲ್ಲಿ ಆಕಾಶ ಬುಟ್ಟಿಗಳು ಝಗಮಗಿಸುತ್ತಿವೆ. ಪ್ರತಿವರ್ಷದಂತೆ ಈ ವರ್ಷವೂ ಮಣ್ಣಿನ ದೀಪಕ್ಕೆ ಭಾರಿ ಬೇಡಿಕೆ ಬಂದಿದೆ. ವಿಭಿನ್ನ ಮಾದರಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಮಣ್ಣಿನ ದೀಪ, ಬಣ್ಣ ಬಣ್ಣದ ಕ್ಯಾಲೆಂಡರ್‌ಗಳನ್ನು ಜನರು ಖರೀದಿಸಿದರು.
ಒಂದು ಡಜನ್ ಹಣತೆಗೆ ರೂ.೪೦ ರಿಂದ ೫೦ ರವರೆಗೆ ಮಾರಾಟ ಮಾಡಲಾಗುತ್ತಿದೆ. ಆಧುನಿಕ ಭರಾಟೆಯಲ್ಲಿ ಪಿಂಗಾಣಿ ಹಣತೆ ವ್ಯಾಪಾರಕ್ಕೆ ಇಂದಿಗೂ ಬೇಡಿಕೆ ಹೆಚ್ಚಿದೆ. ನಗರ ಶರಣಬಸವೇಶ್ವರ ದೇವಸ್ಥಾನ ಎದುರು, ಡಾ.ಎಸ್.ಎಂ.ಪಂಡಿತ ರಂಗಮಂದಿರ ಎದುರು, ಸೂಪರ್ ಮಾರ್ಕೆಟ್‌ನ ವಿವಿಧ ಸ್ಥಳಗಲ್ಲಿ ಪಿಂಗಾಣಿ ಹಣತೆಗಳು ಹೆಚ್ಚು ಮಾರಾಟವಾಗುತ್ತಿವೆ.
