ಉದಯವಾಹಿನಿ, ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್ ಮಾಡಿದ ಉಪನ್ಯಾಸಕನ ಬಂಧನ
ಬೆಂಗಳೂರು ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಯಲಹಂಕದ ಖಾಸಗಿ ಕಾಲೇಜಿನ ಉಪನ್ಯಾಸಕ ಮದಮ್ ಕುಮಾರ್ ಎಂಬಾತ ಕೆಲಸ ಕೊಡಿಸುವುದಾಗಿ ಹೇಳಿ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿರುವ ಹೋಟೆಲ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.ಅಲ್ಲದೇ ಘಟನೆ ಚಿತ್ರೀಕರಿಸಿ ಆಕೆಗೆ ಬ್ಲಾಕ್ ಮೇಲ್ ಮಾಡಿದ್ದ. ಚಿತ್ರಹಿಂಸೆ ತಾಳಲಾರದೆ ಸಂತ್ರಸ್ತೆ ಗಂಗಮ್ಮನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
