ಉದಯವಾಹಿನಿ, ಬೆಂಗಳೂರು: ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನ.24, 25 ಮತ್ತು 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ – ಭಾಷಾ ಸಂಘಟನೆಗಳ ಜೊತೆ ಬೃಹತ್ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ – ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್​​​ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

Leave a Reply

Your email address will not be published. Required fields are marked *

error: Content is protected !!