ಉದಯವಾಹಿನಿ, ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ಕಳೆದ ತಿಂಗಳಿನಲ್ಲಿ ಒಟ್ಟು ೬,೯೯,೩೨೫ ರೂ.ಗಳನ್ನು ವಸೂಲಿ ಮಾಡಲಾಗಿದೆ.
ಬಸ್ ನಲ್ಲಿ ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು ೧೫,೧೬೫ ಟ್ರಿಪ್‌ಗಳನ್ನು ತಪಾಸಣೆ ನಡೆಸಿವೆ.
ಸುಮಾರು ೩೩೫೦ ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ೬,೭೨,೧೨೫ ರೂ.ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರ ವಿರುದ್ಧ ೯೫೩ ಪ್ರಕರಣಗಳನ್ನು ದಾಖಲಿಸಲಾಗಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ೨೭೨ ಪುರುಷ ಪ್ರಯಾಣಿಕರಿಂದ ಒಟ್ಟು ೨೭,೨೦೦ ರೂ.ದಂಡ ವಿಧಿಸಲಾಗಿರುತ್ತದೆ. ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು.
