ಉದಯವಾಹಿನಿ, ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಲಿದೆ.ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿಯೂ ಸಹ ಭಾರೀ ಮಳೆಯಾಗಲಿದೆ.
ಶುಕ್ರವಾರ ಮತ್ತು ಶನಿವಾರ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ವಾರಾಂತ್ಯದಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.
ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ ೧೮ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
