ಉದಯವಾಹಿನಿ, ಬೆಂಗಳೂರು: ರಾಜಧಾನಿ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಸಿದ್ಧವಾಗಿದ್ದು, ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೂ ಅವಕಾಶ ಕಲ್ಪಿಸಲಾಗಿದೆ, ಜತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ.
ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಇನ್ನೂ, ಈ ಅವಧಿವರೆಗೂ ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಗೆ ಸಂಬಂಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!