ಉದಯವಾಹಿನಿ, ಬೆಂಗಳೂರು:  ರಸ್ತೆ ಬದಿ ನಿಲ್ಲಿಸಿದಂತಹ 15ಕ್ಕೂ ಹೆಚ್ಚು ಕಾರುಗಳು ಹಾಗೂ ಬೈಕ್‍ಗಳ ಗಾಜು ಒಡೆದು ಹಾನಿ ಮಾಡಿ ಪರಾರಿಯಾಗಿದ್ದ ಬೊಂಬೆ ಮಾಸ್ಕ್ ಗ್ಯಾಂಗ್‍ನ ಐದು ಮಂದಿಯನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ, ಲಾಂಗು, ಮುಖವಾಡಗಳು, ಎರಡು ಕಬ್ಬಿಣದ ರಾಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡಿ ಆ ಪ್ರದೇಶದಲ್ಲಿ ತಮ್ಮದೇ ಪಾರುಪತ್ಯ ಹೊಂದುವ ಸಲುವಾಗಿ ಈ ಕೃತ್ಯ ಎಸಗಿರುವುದು ತನಿಖೆಯಿಂದ ಕಂಡು ಬಂದಿದೆ. ಮೊದಲನೇ ಆರೋಪಿ ಪೀಣ್ಯ, ಗಂಗಮ್ಮನ ಗುಡಿ, ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳ ಹಗಲು ಮತ್ತು ರಾತ್ರಿ ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.

Leave a Reply

Your email address will not be published. Required fields are marked *

error: Content is protected !!