ಉದಯವಾಹಿನಿ, ಬೆಂಗಳೂರು: ರೈತರಿಗೆ ಮುಖ್ಯ ಮಾಹಿತಿ ….2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್‌ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಆಸಕ್ತ ರೈತರು ನ.16 ರಿಂದ 24ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ಹನಿ ನೀರಾವರಿ ಕಾರ್ಯಕ್ರಮದಡಿ 5 ಹೆಕ್ಟೇರ್ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಪ್ರಥಮ ಆದ್ಯತೆಯಲ್ಲಿ ಅಡಿಕೆ ದೋಟಿಯನ್ನು ಪರಿಗಣಿಸಲಾಗುವುದು. ತೀರ್ಥಹಳ್ಳಿ ತಾಲ್ಲೂಕಿಗೆ ಲಭ್ಯವಾಗುವ ಅನುದಾನ, ಮೀಸಲಾತಿ ನಿಯಮಾವಳಿ ಮತ್ತು ಯೋಜನೆಯ ಮಾರ್ಗಸೂಚಿಯನ್ವಯ ಜೇಷ್ಠತೆ ಅರ್ಜಿಗಳನ್ನು ಕಾರ್ಯಾದೇಶ ನೀಡುವ ಮುಂದಿನ ಕ್ರಮಗಳಿಗಾಗಿ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುಶಾವತಿಯಲ್ಲಿನ ತೋಟಗಾರಿಕೆ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಹೋಬಳಿವಾರು ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಬಹುದೆಂದು ತೀರ್ಥಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!