ಉದಯವಾಹಿನಿ, ತುಮಕೂರು: ಬರದಿಂದ ತತ್ತರಿಸಿರುವ ರೈತರಿಗೆ ಪರಿಹಾರ ಒದಗಿಸಲು ಎಲ್ಲ ಪಕ್ಷದ ಜನಪ್ರತಿನಿಧಿಗಳು ಶ್ರಮಿಸುತ್ತಿದ್ದಾರೆ. ರೈತರು ತಾಳ್ಮೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಹಾಲಪ್ಪ ಹೇಳಿದರು.ತಾಲ್ಲೂಕಿನ ಹೆಬ್ಬೂರು ಎಪಿಎಂಸಿ ಆವರಣದಲ್ಲಿ ಶುಕ್ರವಾರ ಹಾಲಪ್ಪ ಪ್ರತಿಷ್ಠಾನದಿಂದ ಆಯೋಜಿಸಿದ್ದ ‘ರೈತರೊದಿಗೆ ನಾವು’ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರು ಹೆಚ್ಚಾಗಿ ಭೇಟಿ ನೀಡುವ ಜಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಜನರ ಸಮಸ್ಯೆ ಆಲಿಸುತ್ತಿದ್ದಾರೆ ಎಂದು ತಿಳಿಸಿದರು.
ನಬಾರ್ಡ್ ಅಧಿಕಾರಿ ಕೀರ್ತಿಪ್ರಭಾ, ‘ನಬಾರ್ಡ್ ಬ್ಯಾಂಕ್‌ಗಳ ಮೂಲಕ ವಿವಿಧ ಯೋಜನೆಗಳಿಗೆ ಧನ ಸಹಾಯ ಮಾಡುತ್ತಿದೆ. ಹೈನುಗಾರಿಕೆ, ಕೃಷಿ ಚಟುವಟಿಕೆಗಳ ಘಟಕ ವೆಚ್ಚದ ಮೇಲೆ ₹2 ಲಕ್ಷ ವಿಮಾ ಸೌಲಭ್ಯವಿದೆ.
