ಉದಯವಾಹಿನಿ, ಕಲಬುರಗಿ: ಅಫಜಲಪುರ: ನ.16 ರಂದು ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮಹಾಂತಮ್ಮ (8) ಬಿಸಿಯೂಟ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ತೀವ್ರ ಗಂಭೀರ ಸ್ವರೂಪದ ಗಾಯಗಳಾದ ಹಿನ್ನೆಲೆ ಮಹಾಂತಮ್ಮಳನ್ನು ಕಲಬುರಗಿಯ ಜಿಮ್ಸ್ ಹಾಗೂ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3:30 ಕ್ಕೆ ಸಾವನ್ನಪ್ಪಿದ್ದಾಳೆ. ಘಟನೆ ಹಿನ್ನೆಲೆ ಈಗಾಗಲೇ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನ ಅಮಾನತು ಮಾಡಲಾಗಿದೆ.
