ಉದಯವಾಹಿನಿ, ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗಿದ್ದ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರಜೆ ಹಿನ್ನೆಲೆಯಲ್ಲಿ ಮೈಸೂರಿನ ಕಾರುಣ್ಯ ಟ್ರಸ್ಟ್ ನ 25 ಸಿಬ್ಬಂದಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಆಟವಾಡಲೆಂದು ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ. ಕೆಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!