ಉದಯವಾಹಿನಿ, ಬೆಂಗಳೂರು: ಆಕ್ರಮ ಗಣಿಗಾರಿಕೆ ಪ್ರಕಣದಿಂದ ಜೈಲು ಪಾಲಾಗಿ ಬಿಜೆಪಿಯಿಂದ ದೂರ ಸರಿದಿದ್ದ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರನ್ನು ಪುನಃ ಮಾತೃ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ಪಕ್ಷದ ವಲಯದಲ್ಲಿ ಚರ್ಚೆ ಆರಂಭವಾಗಿದೆ.
ಲೋಕಸಭಾ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಗೆಲ್ಲಲು ತಂತ್ರಗಾರಿಕೆ ಹೆಣೆಯತ್ತಿದ್ದು, ಇದರ ಭಾಗವಾಗಿಯೇ ಕೆಕೆಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ನಡೆಯುತ್ತಿವೆ.
