ಉದಯವಾಹಿನಿ, ಬೆಂಗಳೂರು: ಬ್ಲೂಫಿಲಂ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ. ನೀವು ಏನು ಮಾಡಿಕೊಳ್ಳುತ್ತೀರಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ ಜನರ ನಡುವೆ ನಗೆ ಪಾಟಲಿಗೆ ಈಡಾಗುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ನಾನು ಅಂತ ಕೆಲಸ ಮಾಡಿಲ್ಲ, ಮಾಡಿದ್ದನ್ನು ಸಾಬೀತು ಪಡಿಸಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅವರ ತಂದೆ ತಮ್ಮ ವಿರುದ್ಧ ಚುನಾವಣೆಗೆ ನಿಂತು ಸೋಲು ಕಂಡಿದ್ದರು. ಆಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಎಂದರೆ ಒಂದು ಘನತೆ, ಗೌರವ ಇರಬೇಕು. ಕುಮಾರಸ್ವಾಮಿ ಹತಾಶರಾಗಿ ನೀಡುತ್ತಿರುವ ಹೇಳಿಕೆಗಳು ಅವರನ್ನು ನಾಚಿಕೆಗೀಡು ಮಾಡುತ್ತಿವೆ ಎಂದರು.
