ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುವ ಬಗ್ಗೆ ಹೆಚ್ಚು ಗಮನ ನೀಡದೇ ಎಚ್.ಕಾಂತರಾಜು ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿವಾರು ಸಮೀಕ್ಷೆಯ ವರದಿಯನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೧೬೭ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಕಾಂತರಾಜು ಅವರ ನಿಯೋಗದೊಂದಿಗೆ ಕರ್ನಾಟಕ ರಾಜ್ಯದ ಜಾತಿವಾರು ಜನಗಣತಿಯನ್ನು ನಡೆಸಿದ್ದರು. ನಂತರ ಬಂದ ಸರ್ಕಾರ ಈ ಆಯೋಗದ ವರದಿಯನ್ನು ಕಾರಣಾಂತರಗಳಿಂದ ಸ್ವೀಕರಿಸಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಿದ್ದು, ಈ ಕೂಡಲೇ ವರದಿ ಬಹಿರಂಗ ಮಾಡಲಿ ಎಂದು ಮನವಿ ಮಾಡಿದರು. ಮತ್ತೊಂದೆಡೆ ಕೆಲವರು ವರದಿಯ ವಿರುದ್ಧ ಮಾತುಗಳನ್ನಾಡಿದ್ದಾರೆ. ಆದರೆ, ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇರುವುದರಿಂದ ಅದರ ಬಗ್ಗೆ ನಾವು ಯಾವುದೇ ರೀತಿಯ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದ ಅವರು, ರಾಜ್ಯದ ಹಿಂದುಳಿದ ವರ್ಗದಲ್ಲಿರುವ ೧೯೭ ಜಾತಿಗಳಿಗೆ ಸಂಬಂಧಿಸಿದಂತೆ ಶೇ.೯೯ರಷ್ಟು ಯಾವುದೇ ಕಾಯಕ ಸಮಾಜಗಳ ಜನಸಂಖ್ಯೆ ನಿಖರವಾಗಿ ಸರ್ಕಾರಗಳ ಅಧಿಕೃತ ದಾಖಲೆಗಳಲ್ಲಿ ಇಲ್ಲ.

Leave a Reply

Your email address will not be published. Required fields are marked *

error: Content is protected !!