ಉದಯವಾಹಿನಿ,ಕನಕಪುರ: ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಕನ್ನಡ ಭಾಷಾಭಿಮಾನ ತುಂಬಿ, ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದು ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಹಿರಿಯ ನಿರ್ದೇಶಕ ಡಾ.ವಿಜಯಕುಮಾರ್ ತಿಳಿಸಿದರು.ಇಲ್ಲಿನ ರೋಟರಿ ಭವನದಲ್ಲಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಈಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಮತ, ವಿಶ್ವ ಪಥವಾಗಬೇಕು, ಭಾಷಾಭಿಮಾನ ಬೆಳೆಸಿಕೊಳ್ಳಬೇಕು, ನಮ್ಮ ಸಂಸ್ಥೆ 37 ವರ್ಷದಿಂದ ನಡೆದು ಬಂದಿದೆ.
