ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರು ಬೆಂಗಳೂರಿಗೆ ಬರುವುದು ಹಣ ವಸೂಲಿಗೆ ಎನ್ನುವುದಾದರೆ, ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅವರ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇಲ್ಲಿಯೇ ಇರುತ್ತಿದ್ದರಲ್ಲ ಅದಕ್ಕೆ ಏನು ಹೇಳಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಇತ್ತು, ಆಗ ಅವರ ಕಾರ್ಯದರ್ಶಿಯವರು ಯಾವಾಗಲೂ ಇಲ್ಲೇ ಇರುತ್ತಿದ್ದರು. ಆಗ ಅವರೇನು ಮಾಡುತ್ತಿದ್ದರು ಎನ್ನುವ ಪ್ರಶ್ನೆ ಸ್ವಾಭಾವಿಕವಾಗಿ ಬರುತ್ತದೆ. ಮೊದಲು ಬಿಜೆಪಿಯವರು ಅದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.
