ಉದಯವಾಹಿನಿ, ಬೆಂಗಳೂರು: ಹಸುಗೂಸು ಮಾರಾಟ ದಂಧೆಯ ಆರೋಪಿಗಳು ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ನವಜಾತ ಶಿಶುಗಳನ್ನು ಮಾರಾಟ ಮಾಡಿದ್ದಾರೆಂಬುದು ಸಿಸಿಬಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಮಾರಾಟ ಮಾಡಿರುವ ಮಕ್ಕಳ ಪೈಕಿ 50ರಿಂದ 60 ಮಕ್ಕಳನ್ನು ಕರ್ನಾಟಕದಲ್ಲಿ ಹಾಗೂ ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ಹಸುಗೂಸು ಮಾರಾಟ ಸಂಬಂಧ ಬಂಧಿತರಾಗಿರುವ 10 ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಈ ಮಾಹಿತಿ ಹೊರಬಂದಿದೆ.
ಆರೋಪಿಗಳು ಈ ವಿಚಾರವನ್ನು ಬಾಯ್ಬಿಡುತ್ತಿದ್ದಂತೆ ಸಿಸಿಬಿ ಪೊಲೀಸರು ಮತ್ತಷ್ಟು ಕಾರ್ಯಪ್ರವೃತ್ತರಾಗಿ ಕರ್ನಾಟಕದಲ್ಲಿ ಮಾರಾಟವಾಗಿರುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ ವಿವರಗಳನ್ನು ಪಡೆಯುತ್ತಿದ್ದಾರೆ.
