ಉದಯವಾಹಿನಿ,ಬೆಂಗಳೂರು:  ಆರೋಗ್ಯ ಕವಚ ಯೋಜನೆಯಡಿ ಒದಗಿಸಲಾಗುತ್ತಿರುವ 108 ತುರ್ತು ಆ್ಯಂಬುಲೆನ್ಸ್ ಸೇವೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ 262 ಆ್ಯಂಬುಲೆನ್ಸ್‍ಗಳನ್ನು ಆರೋಗ್ಯ ಕವಚ ಯೋಜನೆಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ್ಯಂಬುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚಾಲಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಕನಕಪುರಕ್ಕೆ ಮೆಡಿಕಲ್ ಕಾಲೇಜು ಬೇಕು ಎಂದು ನಾನು ಏಕೆ ಕೇಳಿಕೊಳ್ಳುತ್ತೇನೆ ಎಂದರೆ 108 ಚಾಲಕರದ್ದು ಒಂದು ಚೇಸ್ಟೆ ಇದೆ. ಮಳವಳ್ಳಿ ಕಡೆಯಿಂದ ಅನೇಕರು ಬರುತ್ತಾರೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ, ಖಾಸಗಿ ಆಸ್ಪತ್ರೆಗಳ ಜತೆ ಹೊಂದಾಣಿಕೆ ಮಾಡಿಕೊಂಡು ಆ್ಯಂಬುಲೆನ್ಸ್ ಚಾಲಕರು ರೋಗಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತಾರೆ.

Leave a Reply

Your email address will not be published. Required fields are marked *

error: Content is protected !!