ಉದಯವಾಹಿನಿ, ದಾವಣಗೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ. ೪ ರಂದು ಬೆಳಗ್ಗೆ ೧೧ ಕ್ಕೆ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗುತ್ತಾ ಬಂತು ಆದರೆ ಕೊಟ್ಟ ಮಾತಿನಂತೆ ನಡೆಯದಿರುವ ಸರ್ಕಾರದ ನಡೆ ಖಂಡನೀಯ ಎಂದರು.
ಕಾಂಗ್ರೆಸ್ ಸರ್ಕಾರ ರೈತರನ್ನು ಕಡೆಗಣಿಸಿದೆ.ರಾಜ್ಯದಲ್ಲಿ ಬರಗಾಲ ಬಂದು ರೈತರ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ.ರೈತರ ನೆರವಿಗೆ ಧಾವಿಸಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ.ಬೆಳೆವಿಮೆ ಕೊಡಿಸುವ ದಿಕ್ಕಿನಲ್ಲಿ ಯಾವುದೇ ಕಾರ್ಯಕ್ರಮ ನೀಡಿಲ್ಲ.ಬೆಳೆ ರಕ್ಷಣೆ ಯೋಜನೆಗಳಿಲ್ಲ ಆದರೆ ಪಂಚರಾಜ್ಯಗಳ ಚುನಾವಣೆ ಇವರಿಗೆ ಮುಖ್ಯವಾಗಿದೆ ಎಂದರು.೨೦೨೦ ರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದವು ಆ ವೇಳೆ ವಿಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷವರು ರೈತರ ಜೊತೆ ಹೋರಾಟಕ್ಕೆ ಬಂದು ರೈತರಿಗೆ ಬೆಂಬಲ ನೀಡಿದ್ದರು ಹಾಗೂ ಈ ಕಾಯ್ದೆ ರದ್ದಾಗಬೇಕು. ಈ ಕಾಯ್ದೆಯಿಂದ ರೈತರಿಗೆ ಅನ್ಯಾಯವಾಗಲಿದೆ ಎಂದಿದ್ದರು.
