ಉದಯವಾಹಿನಿ, ಚಾಮರಾಜನಗರ : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೇಗುಲದ ಹಿಂಭಾಗದಲ್ಲಿರುವ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಇಂದು ಮಧ್ಯಾಹ್ನ 2:30 ರ ಸುಮಾರಿಗೆ 10-15 ಮಂದಿ ಸಿಬ್ಬಂದಿ ಲಾಡು ತಯಾರಿಕೆಯಲ್ಲಿ ತೊಡಗಿದ್ದರು.
ಅವರು ಊಟಕ್ಕೆ ತೆರಳಿದ ವೇಳೆಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
