ಉದಯವಾಹಿನಿ, ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೊಂದಾಯಿತ ಮದರಸಗಳ ಆಧುನಿಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 2 ಮದರಸಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸ್ವಂತ ಕಟ್ಟಡವನ್ನು ಹೊಂದಿರುವ ಮದರಸಗಳಿಂದ ಅರ್ಜಿ ಆಹ್ವಾನಿಸಿದೆ.
ಮದರಸಗಳಲ್ಲಿ ಕನಿಷ್ಠ 10 ಮಕ್ಕಳ ದಾಖಲಾತಿ ಸಂಖ್ಯೆ ಹೊಂದಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳಿರುವ ಹಾಗೂ ಮೂಲಭೂತ ಸೌಕರ್ಯಗಳ ಅತಿ ಅಗತ್ಯವಿರುವ ಮದರಸಾಗಳನ್ನು ಆಯ್ಕೆ ಮಾಡಲಾಗುವುದು. ಈಗಾಗಲೇ ಇದೇ ಉದ್ದೇಶಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ವಕ್ಫ್ ಮಂಡಳಿಯಿಂದ ಅನುದಾನ ಪಡೆದಿದ್ದಲ್ಲಿ ಅಂತಹ ಮದರಸಗಳನ್ನು ಪರಿಗಣಿಸುವುದಿಲ್ಲ. ಅರ್ಹ ಮದರಸಗಳಿಗೆ ಒಂದು ಬಾರಿಗೆ ಗರಿಷ್ಠ 5.00 ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಲಾಗುವುದು. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಡಿ. 15 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *

error: Content is protected !!