ಉದಯವಾಹಿನಿ, ಚಿಕ್ಕಬಳ್ಳಾಪುರ : ಆರು ವರ್ಷದ ಬಾಲಕನನ್ನು ತಾಯಿಯ ಅಕ್ಕನೇ ಅಪಹರಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುತ್ತುಕಡಹಳ್ಳಿ ಗ್ರಾಮದಲ್ಲಿ ನಡೆದಿದೆ.ಆರೋಪಿ ಅಂಬಿಕಾ ಮತ್ತು ಮೃತ ಬಾಲಕನ ತಾಯಿ ಅನಿತಾ ಸಹೋದರಿಯರು. ಅನಿತಾ ಮೇಲಿನ ಸಿಟ್ಟಿಗೆ ಅಂಬಿಕಾ ಸಹೋದರಿಯ ಮಗನನ್ನು ಕೊಂದು ಶವವನ್ನು ಚಿಕ್ಕಬಳ್ಳಾಪುರದ ಜಮೀನಿನಲ್ಲಿ ಹೂತುಹಾಕಿದ್ದಾಳೆ ಎಂದು ವರದಿ ತಿಳಿಸಿದೆ.ಅಂಬಿಕಾಳ ಅನೈತಿಕ ಸಂಬಂಧಕ್ಕೆ ಅನಿತಾ ಅಡ್ಡಿಯಾಗುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅಂಬಿಕಾ ತಂಗಿ ಮೇಲಿನ ಕೋಪಕ್ಕೆ ಏನೂ ಅರಿಯದ 6 ವರ್ಷದ ಕಂದಮ್ಮನ್ನು ಕೊಲೆ ಮಾಡಿ ಶವವನ್ನು ಜಮೀನಿನಲ್ಲಿ ಹೂತು ಹಾಕಿದ್ದಾಳೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಬ್ಬನ್ ಪಾರ್ಕ್ ಪೊಲೀಸರು ಮಹಿಳೆಯನ್ನು ಬಂಧಿಸಿ ಪೆರೇಸಂದ್ರ ಪೊಲೀಸರಿಗೆ ಒಪ್ಪಿಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆಟೋ ರಿಕ್ಷಾ ಚಾಲಕ ನೀಡಿದ ಮಾಹಿತಿಯ ಆಧಾರದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ.
