ಉದಯವಾಹಿನಿ, ಕೋಲಾರ: ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ,ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತರುವ ನೇರ ಪಾವತಿ ಪೌರ ಕಾರ್ಮಿಕರು ಹಾಗೂ ಲೋಡರ್ಸ್,ಆಟೋ ಮತ್ತು ಟಿಪ್ಪರ್ ವಾಹನ ಚಾಲಕರು ಮತ್ತು ಸಹಾಯಕರು,ಸೂಪರ್ ವೈಸರ್ ಗಳು,ಡಾಟಾ ಎಂಟ್ರಿ ಆಪರೇಟರ್ಸ್ ಹಾಗೂ ನೀರು ಸರಬರಾಜು ಕಾರ್ಮಿಕರನ್ನು ಒಂದೇ ಬಾರಿಗೆ ಖಾಯಂ ಮಾಡುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಿಲ್ಲಾ ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿ ಹಾಗೂ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾ ಘಟಕದ ಸದಸ್ಯರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮುಖ್ಯ ಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘದ ಮುಖಂಡರುಗಳು ನಮ್ಮಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಹಕ್ಕುಗಳಿಗಾಗಿ ಕಳೆದ ೨೦ ವರ್ಷಗಳಿಂದ ಹೋರಾಟ ನಡೆಸುತ್ತಿದ್ದು,ಕನಿಷ್ಠ ವೇತನ,ಭವಿಷ್ಯ ನಿಧಿ,ಆರೋಗ್ಯ ವಿಮೆ,ಮಕ್ಕಳ ಶಿಕ್ಷಣ, ಉದ್ಯೋಗ ಭದ್ರತೆ ಹಾಗೂ ಮೂಲ ಭೂತ ಸೌಲಭ್ಯಗಳಿಂದ ವಂಚನೆಗೆ ಒಳಗಾಗಿದ್ದೇವೆಂದು ದೂರಿದರು.
ಹಿಂದಿನ ಮುಖ್ಯ ಮಂತ್ರಿಗಳಾಗಿದ್ದ ಬಸರಾಜ್ ಬೊಮ್ಮಾಯಿಯವರು ಹಾಗೂ ಪ್ರಸ್ತುತ ಮುಖ್ಯ ಮಂತ್ರಿಗಳಾಗಿರುವ ಸಿದ್ಧರಾಮಯ್ಯ ನವರು ಸಹ ೨೫ ಸಾವಿರ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಆಶ್ವಾಸನೆ ನೀಡಿದ್ದರು,ಆದರೆ ಆಶ್ವಾಸನೆಗಳು ಕಾರ್ಯಗತಕ್ಕೆ ಬರದೆ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಅನುಷ್ಠಾನಕ್ಕೆ ತರದೆ ನಿರ್ಲಕ್ಷ್ಯ ವಹಿಸಿದೆಯೆಂದು ಆರೋಪಿಸಿದರು.
ಪ್ರಸ್ತುತ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಚರ್ಚಿಸಿ ಎಲ್ಲಾ ಪೌರಕಾರ್ಮಿಕರನ್ನು ಒಂದೇ ಬಾರಿಗೆ ಖಾಯಂ ಮಾಡುವ ನಿರ್ಣಯ ಕೈಗೊಳ್ಳ ಬೇಕೆಂದು ಮನವಿ ಮಾಡಿ ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!