ಉದಯವಾಹಿನಿ, ನವದೆಹಲಿ: ದುಬೈನಲ್ಲಿ ನಡೆಯುತ್ತಿರುವ ಕಾಪ್ 28 ಹವಾಮಾನ ಶೃಂಗಸಭೆಯ ಸಂದರ್ಭದಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತಮ್ಮ ಭಾರತೀಯ ಸಹವರ್ತಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ.ತಾವು ಮೋದಿ ಅವರೊಂದಿಗೆ ತೆಗೆದುಕೊಂಡಿರುವ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಮೆಲೋನಿ ಅವರು ಹಂಚಿಕೊಂಡಿದ್ದು, ಆ ಚಿತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್, ಮಾಜಿ ಬ್ರಿಟನ್ ಪ್ರಧಾನಿ ಟೋನಿ ಬ್ಲೇರ್, ಟರ್ಕಿ ಅಧ್ಯಕ್ಷ ಆರ್‍ಟಿ ಎರ್ಡೊಗನ್, ಸ್ವೀಡಿಷ್ ಪ್ರಧಾನಿ ಉಲ ಕ್ರಿಸ್ಟರ್ಸನ್ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸೇರಿದಂತೆ ಇತರ ನಾಯಕರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ನಾಲ್ಕು ಅವೇಶನಗಳನ್ನು ಉದ್ದೇಶಿಸಿ ಮಾತನಾಡುವಾಗ ಪಿಎಂ ಮೋದಿ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛ ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸುವ ಮಾರ್ಗಗಳ ಕುರಿತು ಚರ್ಚಿಸಲು ಪ್ರಧಾನಿ ಅವರಿಗೆ ಅವಕಾಶವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!