ಉದಯವಾಹಿನಿ, ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ.
ಡಿ.6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೇ ಈ ಸಭೆ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿಕೂಟ ನಾಯಕರ ಸಭೆ ಕರೆದಿರುವುದು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!