ಉದಯವಾಹಿನಿ, ಹೈದರಾಬಾದ್: ಇಬ್ಬರು ಅಧಿಕಾರಿಗಳೊಂದಿಗೆ ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವೊಂದು ಇಂದು ಬೆಳಗ್ಗೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ತೂಪ್ರಾನ್ ಮಂಡಲದಲ್ಲಿ ಈ ಘಟನೆ ಸಂಭವಿಸಿದ್ದು, ವಿಮಾನ ಪತನಗೊಂಡ ಸಂದರ್ಭದಲ್ಲಿ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು ಎಂದು ಅವರು ಹೇಳಿದ್ದಾರೆ. ಅವರ ಸ್ಥಿತಿ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಗೆ ಸಮೀಪದ ದುಂಡಿಗಲ್‍ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (ಎಎಫ್‍ಎ) ವಿಮಾನ ಟೇಕ್ ಆಫ್ ಆಗಿದೆ ಎಂದು ಹಿರಿಯ ಪೊಲೀಸ್ ಅಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಎಎಫ್‍ಎ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
