ಉದಯವಾಹಿನಿ, ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾದ ಚಳಿ ಗಾಲದ ಅಧಿವೇಶನದಲ್ಲಿ ಆಡಳಿತಾ ರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷ ಗಳಾದ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಯಾಗಿ ಅಖಾಡಕ್ಕೆ ಧುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರ ದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.
ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ.
ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಾಗುತ್ತಿಲ್ಲ. ಗೃಹ ಒಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಮಹಿಳೆಯರ ಖಾತೆಗೆ ಪಾವತಿಯಾಗುತ್ತಿಲ್ಲ. ಯುವನಿ ಇನ್ನೂ ಜಾರಿಯೇ ಆಗಿಲ್ಲ. ಗೃಹ ಜ್ಯೋತಿಯಡಿ 200 ಯೂನಿಟ್ ಎಂದು ಹೇಳಿ ಷರತ್ತು ಹಾಕಿ ಕಡಿತ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಕಲ್ಪಿಸಿದ್ದರೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡದ ಕುರಿತು ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಉಭಯ ಪಕ್ಷಗಳು ಮುಂದಾಗಿವೆ.
