ಉದಯವಾಹಿನಿ, ಬಳ್ಳಾರಿ: ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ಈ ಮೂರು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ನಿನ್ನೆ ಸಂಜೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರಲ್ಲಿ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ವೇಳೆ ಜಯೋತ್ಸವ ಆಚರಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ,
ಮತ ಎಣಿಕೆಯಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ನಿರೀಕ್ಷೆಯಂತೆಯೇ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಚುನಸವಣೆಯಲ್ಲಿ ಜನವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್‌ಗೆ ಮತದಾರರು ಸೂಕ್ತ ಪಾಠ ಕಲಿಸಿದ್ದಾರೆ ಎಂದಿದ್ದಾರೆ. ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಕೂಚಿಯಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಸ್ಪಷ್ಟ ಬಹುಮತದೊಂದಿಗೆ ದೇಶದಲ್ಲಿ ಅಧಿಕಾರಕ್ಕೆ ಬರುವುದು ಖಚಿತ ನರೇಂದ್ರ ಮೋದಿ ಅವರು ಪುನಃ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಸಂದೇಶ ದೊತೆತಿದೆಂದರು.
