ಉದಯವಾಹಿನಿ, ಬೆಂಗಳೂರು: ಮೈಚಾಂಗ್ ಚಂಡಮಾರುತವು ಮುಂದಿನ ೨೪ ಗಂಟೆಗಳಲ್ಲಿ ತೀವ್ರಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗಿ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..ಸದ್ಯ ಬಂಗಾಳಕೊಲ್ಲಿಯಲ್ಲಿ ಗಂಟೆಗೆ ೧೮ ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇಂದು ಮತ್ತು ಬುಧವಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮಿಚುಂಗ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಮುಂದಿನ ೪೮ ಗಂಟೆಗಳಲ್ಲಿ, ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ೨ ರಿಂದ ೩ ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಆದ್ದರಿಂದ, ರಾತ್ರಿ ಮತ್ತು ಬೆಳಿಗ್ಗೆ ಹೆಚ್ಚಿನ ಸ್ಥಳಗಳಲ್ಲಿ ತಂಪಾದ ಗಾಳಿ ಬೀಸುತ್ತದೆ ಮತ್ತು ಹವಾಮಾನವು ತಂಪಾಗಿರುತ್ತದೆ ಎನ್ನಲಾಗಿದೆ.
