ಉದಯವಾಹಿನಿ, ಬೆಂಗಳೂರು: ಪಕ್ಷದಲ್ಲಿ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಡಿ.9ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಗರದ ಜೆಪಿ ಭವನದಲ್ಲಿ ನಡೆಯುವ ಸಭೆಯಲ್ಲಿ ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತ್ತು ಮಾಡಿದ ನಂತರ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಇದಾಗಿದ್ದು, ಕೆಲವು ಮಹತ್ವದ ನಿರ್ಣಯಗಳನ್ನು ಪಕ್ಷ ಕೈಗೊಳ್ಳಲಿದೆ. ಮುಂಬರುವ ಲೋಕಸಭೆ ಚುನಾವಣೆ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ, ಪಕ್ಷದ ವಿವಿಧ ಘಟಕಗಳ ಪುನಾರಚನೆ, ಎನ್.ಡಿ.ಎ ಮೈತ್ರಿಕೂಟ ಸೇರ್ಪಡೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!