ಉದಯವಾಹಿನಿ, ಬೆಂಗಳೂರು: ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದ ಹಿನ್ನೆಲೆ ಮತ್ತು ಸುರಕ್ಷಿತ, ಸುಸ್ಥಿರ ಮತ್ತು ಆರೋಗ್ಯಕರ ಭವಿಷ್ಯದ ಕಡೆಗೆ ಜನಾಂದೋಲನವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಅವರಣದಲ್ಲಿ ಡಿ ೯ ರಿಂದ ೧೧ ರವರೆಗೆ ಜಾಗತಿಕ ಮಟ್ಟದ “ಸಿರಿಧಾನ್ಯ, ಸಾವಯವ ಮತ್ತು ನೈಸರ್ಗಿಕ ಕೃಷಿ ಉತ್ಪನ್ನಗಳ ಮೇಳ” ಆಯೋಜಿಸಲಾಗಿದೆ.
ಗುರುದೇವ ರವಿಶಂಕರ್ ಗುರೂಜಿ ಸಾನಿಧ್ಯದಲ್ಲಿ ಸಿರಿಧಾನ್ಯಗಳ ಚಿಂತನ, ಮಂಥನಕ್ಕೆ ಅಗತ್ಯ ಸಿದ್ಧತೆ ನಡೆಯುತ್ತಿದೆ.ದೇಶ, ವಿದೇಶಗಳ ಸಿರಿಧಾನ್ಯ ಪರಿಣಿತರು ಭಾಗವಹಿಸಲಿರುವ ಈ ಮೇಳದ ವೈಶಿಷ್ಟ್ಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ. ಸುರೇಶ ಅವರು, ಶ್ರೀ ಶ್ರೀ ನೈಸರ್ಗಿಕ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಈ ಮೇಳ ಆಯೋಜಿಸುತ್ತಿದ್ದು, ಸಿರಿಧಾನ್ಯಗಳನ್ನು ತಮ್ಮ ಆಹಾರದ ಒಂದು ಭಾಗವಾಗಿ ಮಾಡುವ ಜೊತೆಗೆ ಆರೋಗ್ಯ-ಪ್ರಜ್ಞೆ ಮತ್ತು ಭೂ-ಸ್ನೇಹಿ ವಾತಾವರಣ ಸೃಷ್ಟಿಸುವ ಉದ್ದೇಶ ಹೊಂದಲಾಗಿದೆ. ಸಿರಿಧಾನ್ಯಗಳು ಸಣ್ಣ ಉದ್ದಿಮೆಗಳು, ರೈತರು ಮತ್ತು ಸಮುದಾಯಗಳನ್ನು ಒಳಗೊಳ್ಳುವ ಮೂಲಕ ಉನ್ನತ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಡಿ೯ ಚೆಲುವರಾಯಸ್ವಾಮಿ, ಕೃಷಿ ಮಂತ್ರಿಗಳು ಬೃಹತ್ ಮೇಳದ ಉದ್ಘಾಟನೆಯನ್ನು ಮಾಡಲಿದ್ದಾರೆ.
