ಉದಯವಾಹಿನಿ, ಬೆಂಗಳೂರು: ಡಿ.೧೩ರವರೆಗೆ ಸತತವಾಗಿ ಮಳೆಯಾಗಲಿದೆ ಈ ಕುರಿತು ಕೆಲವು ಜಿಲ್ಲಾಡಳಿತಗಳಿಗೂ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಆರ್ಭಟ ಶುರುವಾಗಲಿದೆ.ಡಿಸೆಂಬರ್ ೧೩ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಅಲ್ಪ ವಿರಾಮದ ನಂತರ ಭರ್ಜರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ಧಾರವಾಡ, ಹುಬ್ಬಳ್ಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಪ್ರಕಾರ ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಅಲ್ಲದೇ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆ ಬೀಳಲಿದೆ. ಅಲ್ಲದೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
