ಉದಯವಾಹಿನಿ, ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಹಾಗೂ ೨೫ ಪಂಗಡಗಳ ಬೃಹತ್ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ ೧೦ ಭಾನುವಾರ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಡಿಗ ಸಮಾಜದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡ, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಅಸ್ತಿತ್ವಕ್ಕೆ ಬಂದು ಇಂದಿಗೆ ೭೮ ವರ್ಷಗಳು ಕಳೆದಿವೆ. ಈ ಹಿನ್ನಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.೧೯೯೫ರಲ್ಲಿ ನಡೆದ ಮೂರನೇ ಬೃಹತ್ ಈಡಿಗ ಸಮಾವೇಶದಲ್ಲಿ ನಿರ್ಧರಿಸಿದಂತೆ ಒಂದು ಸಮುದಾಯ ಒಂದೇ ಜಾತಿ ಎಂಬ ಘೋಷಣೆಯೊಂದಿಗೆ ಇಂದು ೨೬ ಉಪ ಪಂಗಡಗಳು ಒಂದೇ ಎಂದು ತೋರಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಮ್ಮ ಸಂಖ್ಯಾ ಬಲವನ್ನು ಸರ್ಕಾರಕ್ಕೆ ತೋರಿಸಿ ಸರ್ಕಾರದ ಸಕಲ ಸೌಲಭ್ಯಗಳನ್ನು ಒದಗಿಸುವ ಹಾಗೂ ನಮ್ಮ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
