ಉದಯವಾಹಿನಿ, ಕೋಲಾರ: ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಖಾಯಂಗೊಳಿಸಲು ಒತ್ತಾಯಿಸಿ, ಹನ್ನೆರಡನೆಯ ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದೆ.
ಕೋಲಾರದ ಶಾಶ್ವತ ನೀರಾವರಿ ಹೋರಾಟ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿ ಸರಕಾರ ಬೇಡಿಕೆ ಈಡೇರಿಸದಿದ್ದರೆ ಡಿ.೭ರಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಧರಣಿನಿರತರು ಎಚ್ಚರಿಸಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ಮಾಧ್ಯಮದೊಂದಿಗೆ ಮಾತನಾಡಿ, ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ಡಿಸೆಂಬರ್ ೧ರಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಉಪನ್ಯಾಸಕರ ಅಹವಾಲುಗಳನ್ನು ಸ್ವೀಕರಿಸಿ ಬೇಡಿಕೆ ಈಡೇರಿಕೆಗೆ ತಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಸರಕಾರ ಉಪನ್ಯಾಸಕರ ಖಾಯಂಗೊಳಿಸಲು ಆದೇಶ ಅಥವಾ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವುದಿಲ್ಲ ಎಂದು ತಿಳಿಸಿದರು. ಉಪನ್ಯಾಸಕರು ತರಗತಿಗಳನ್ನು ತ್ಯಜಿಸಿ ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಕೋಲಾರ ಜಿಲ್ಲೆಯ ಯರಗೋಳ್ ಡ್ಯಾಂ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾದು ನೋಡಬೇಕು ಎಂದು ಭರವಸೆಯ ಮಾತುಗಳು ಹೇಳಿದ್ದರು ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!