ಉದಯವಾಹಿನಿ, ಚಿಕ್ಕಬಳ್ಳಾಪುರ : ಮರಕ್ಕೆ ಬಸ್ ಡಿಕ್ಕಿ ಹೊಡೆದು ನಂತರ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯದಲ್ಲಿ ನಡೆದಿದೆ.
ವೇಗವಾಗಿ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನಂತರ ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ.
ಸಕಾಲಕ್ಕೆ ಆಂಬುಲೆನ್ಸ್ ಬಾರದ ಹಿನ್ನೆಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಗಾಯಾಳುಗಳನ್ನು ಬೈಕ್ ನಲ್ಲಿ ಹಾಗೂ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಗಾಯಾಳುಗಳನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 30 ಕ್ಕೂ ಹೆಚ್ಚು ಮಂದಿಗೆ ತೀವ್ರತರಹದ ಗಾಯಗಳಾಗಿದೆ.

Leave a Reply

Your email address will not be published. Required fields are marked *

error: Content is protected !!