ಉದಯವಾಹಿನಿ, ದಾವಣಗೆರೆ: ಡ್ರೈವಿಂಗ್ ಸ್ಕೂಲ್ ಮಾಲೀಕರ ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ರಾಜ್ಯ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರ ಸಂಘಗಳ ಒಕ್ಕೂಟದಿಂದ ಡಿ.೮ ರಂದು ಬೆಳಗ್ಗೆ ೯ ಗಂಟೆಗೆ ಬೆಳಗಾವಿಯ ಸುವರ್ಣಸೌಧಕ್ಕೆ ಪಾದಯಾತ್ರೆ ಮೂಲಕ. ತೆರಳಿ‌ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಫಯಾಜ್ ಅಹಮದ್ ಹೇಳಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ‌ ಸುಮಾರು 2000 ಮೋಟಾರು ಡ್ರೈವಿಂಗ್ ಸ್ಕೂಲ್ ಗಳಿವೆ ಇದನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವು 2022 ರಿಂದ ನಮಗೆ ಮಾರಕವಾದ ಹೊಸ ನೀತಿಯನ್ನು ಜಾರಿ ಮಾಡಿರುವುದು ವಿಷಾಧನಿಯ ಸಂಗತಿ, ಕೆಲವು ರಾಜ್ಯಗಳಲ್ಲಿ ಇವುಗಳನ್ನು ಅನುಷ್ಠಾನಗೋಳಿಸದೇ ಆ ರಾಜ್ಯದ ಜನರ ಅನುಕೂಲಕ್ಕೆ ತಕ್ಕಂತೆ ಕಾನೂನು ರೂಪಿಸಿಕೊಂಡಿವೆ. ಅದೇರೀತಿ ಕರ್ನಾಟಕಕ್ಕೂ ಹೊಸ ನೀತಿ ತಂದರೆ ನಮ್ಮ ಮೊಟಾರ್ ಡ್ರೈವಿಂಗ್ ಸ್ಕೂಲ್ ಗಳು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಬರಲಿದೆ. ಈಗಾಗಲೇ ಸಾರಿಗೆ ಆಯುಕ್ತರಿಗೂ ಮತ್ತು ಹಿಂದಿನ ಸರ್ಕಾರದ ಸಾರಿಗೆ ಸಚಿವರಿಗೂ ಹಲವು ಬಾರಿ ಮನವಿ ಪತ್ರಗಳನ್ನು ನೀಡಿದ್ದೇವೆ.

Leave a Reply

Your email address will not be published. Required fields are marked *

error: Content is protected !!