ಉದಯವಾಹಿನಿ, ಕೋಲಾರ: ಡಿಜಿಟಲ್ ಯುಗದಲ್ಲಿ ಮನ್ನಡೆಯಬೇಕಾದರೆ ಕಂಪ್ಯೂಟರ್ ಜ್ಞಾನ ಅತ್ಯಂತ ಅವಶ್ಯಕವಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಕಲಿತು ಸದುಪಯೋಗಪಡಿಸಿ ಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಕ್ರಂಪಾಷ ಕರೆ ನೀಡಿದರು.
ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಬೆಂಗಳೂರು ಇಂಡಿಜಿನ್ ರವರ ಸಹಯೋಗದೊಂದಿಗೆ ಬೆಂಗಳೂರು ರೋಟರಿ ಲೇಕ್ ಸೈಡ್, ಕೋಲಾರ ರೋಟರಿ, ರೋಟರಿ ಲೇಕ್ ಸೈಡ್, ರೋಟರಿ ನಂದಿನಿ , ರೋಟರಿ ಸೆಂಟ್ರಲ್ ಸಂಂಯುಕ್ತಾಶ್ರಯದಲ್ಲಿ ತಾಲೂಕಿನ ಮದನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ವಿವಿಧ ವಸತಿ ಶಾಲೆಗಳಿಗೆ ೧೦೦ ಲ್ಯಾಪ್ ಟಾಪ್ ವಿತರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಮಾತನಾಡಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯನಿವರ್ಹಿಸುತ್ತಿದ್ದು, ಉತ್ತಮ ಗುಣಮಟ್ಟದ ವಸತಿ ಶಿಕ್ಷಣ ನೀಡುತ್ತಿವೆ. ಬಡ ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಗ್ಲೋಬಲ್ ಡಿಲಿವರಿ ಇಂಡಿಜಿನ್ ಉಪಾದ್ಯಕ್ಷ ಡಾ.ಸೌರಭ್ ಜೈನ್ ಮಾತನಾಡಿ, ತಮ್ಮ ಸಂಸ್ಥೆಯು ಗ್ರಾಮೀಣ ಭಾಗದ ಅಭಿವೃದ್ದಿಗಾಗಿ ಸಿಎಸ್‌ಆರ್ ಅನುದಾನದಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದಾಗಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!