ಉದಯವಾಹಿನಿ, ಬೆಂಗಳೂರು : ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮಾತನಾಡಿದರು.
ಎಸ್. ನಿಜಲಿಂಗಪ್ಪನವರು ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿಯಾದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು ಎಂದರು.

ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!