
ಉದಯವಾಹಿನಿ, ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿಪಾಳ್ಯದ ಗಂಗಾ ಕ್ಷೇತ್ರದ ಬಳಿ ಸೋಮವಾರ ಬೆಳಗಿನ ಜಾವ ಗಂಡು ಚಿರತೆ ಬೋನಿಗೆ ಬಿದ್ದಿದೆ.ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿತ್ತು. ನಾಯಿ, ಕುರಿ, ಮೇಕೆಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ನಂದಿಪಾಳ್ಯ ಸುತ್ತಮುತ್ತಲಿನ ಜನರಲ್ಲಿ ಆತಂಕ ಹೆಚ್ಚಾಗಿತ್ತು.
ಸಾರ್ವಜನಿಕರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಚಿರತೆ ಸೆರೆಯಾಗಿದ್ದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಚಿರತೆ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ.
